ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕ್ರೋ ಚಿಪ್ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕ್ರೋ ಚಿಪ್ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ ದಿನಾಂಕ ಹಾಗೂ ಇನ್ನಿತರ ಅಂಶಗಳನ್ನು ಶಾಶ್ವತವಾಗಿ ಅದರಲ್ಲಿ ಶೇಖರಿಸಿ ಇಡಬಹುದಾಗಿರುತ್ತದೆ.
ಮೈಕ್ರೋ ಚಿಪ್ ತಂತ್ರಜ್ಞಾನವನ್ನು ಈಗಾಗಲೇ ಹಲವಾರು ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳಿಗೆ ಅಳವಡಿಸಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ BIZ ORBIT ಎಂಬ ಸಂಸ್ಥೆಯ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಬೀದಿ ನಾಯಿಗಳಿಗೆ ಅಳವಡಿಕೆ ಮಾಡಲಾಗುತ್ತಿದೆ.
ಅಕ್ಕಿಕಾಳು ಗಾತ್ರದ ಮೈಕ್ರೋ ಚಿಪ್ ಅಳವಡಿಕೆ:
ಮೈಕ್ರೋಚಿಪ್ ಒಂದು ಅಕ್ಕಿಕಾಳು ಗಾತ್ರದ ಸಾಧನವಾಗಿದ್ದು, ಪ್ರಾಣಿಗಳಲ್ಲಿ ಶಾಶ್ವತ ಗುರುತಿನ ವಿಧಾನವಾಗಿರುತ್ತದೆ. ಇದನ್ನು ಪ್ರಾಣಿಗಳ ಚರ್ಮದ ಕೆಳಗೆ ಇಂಜೆಕ್ಷನ್ ಮೂಲಕ ಇರಿಸಲಾಗುವುದು. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ ಮತ್ತು ಇದು ಪ್ರಾಣಿಗಳ ಜೀವನ ಪರ್ಯಂತ ಶಾಶ್ವತ ಗುರುತಾಗಿ ಬಳಸಬಹುದಾಗಿರುತ್ತದೆ. ಇದು ಪ್ರಪಂಚದಾದ್ಯಂತ ಬಳಸಲಾಗುವ ಯೂನಿಕ್ ಸಂಖ್ಯೆಯಾಗಿರುತ್ತದೆ.
ಯಶಸ್ವಿಯಾದರೆ ಇರತೆ ವಲಯಗಳಲ್ಲೂ ಅಳವಡಿಕೆ:
ಪ್ರಾಯೋಗಿಕ ಮೈಕ್ರೋ ಚಿಪ್ ಅಳವಡಿಸುವ ಕಾರ್ಯ ಯಶಸ್ವಿಯಾದರೆ, ಅದನ್ನು ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಬೀದಿ ನಾಯಿಗಳಿಗೆ ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪಾಲಿಕೆ ವತಿಯಿಂದ ಬೀದಿ ನಾಯಿಗಳಿಗೆ ಸಂಯೋಜಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಿದ್ದು, ಮೈಕ್ರೋ ಚಿಪ್ ಅಳವಡಿಸುವ ತಂತ್ರಜ್ಞಾನದಿಂದ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಿಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.
ಪ್ರಸ್ತುತ ಬಣ್ಣ ಬಳಸಿ ಗುರುತಿಸಲಾಗುತ್ತಿದೆ:
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಲಸಿಕೆ ಹಾಕಿದ ಬೀದಿನಾಯಿಗಳಿಗೆ ಬಣ್ಣವನ್ನು ಬಳಸಿ ಗುರುತಿಸಲಾಗುತ್ತಿದ್ದು, ಒಂದು ವಾರ ಮಾತ್ರ ಬಣ್ಣದ ಗುರುತು ಪತ್ತೆಹಚ್ಚಬಹುದಾಗಿರುತ್ತದೆ. ಆದುದರಿಂದ ಬೀದಿನಾಯಿಗಳಿಗೆ ಪದೇ ಪದೇ ಲಸಿಕೆ ಹಾಕುವ ಸಾಧ್ಯತೆಯಿರುತ್ತದೆ. ಮೈಕ್ರೋ ಚಿಪ್ ತಂತ್ರಜ್ಞಾನದಿಂದ ಈ ನ್ಯೂನತೆಯನ್ನು ಸರಿಪಡಿಸಬಹುದಾಗಿರುತ್ತದೆ ಹಾಗು ನಾಯಿಗಳಲ್ಲಿ ಲಸಿಕೆ ಹಾಕಿರುವ ಮಾಹಿತಿಯನ್ನು ನಿಖರವಾಗಿ ತಿಳಿಯಬಹುದಾಗಿರುತ್ತದೆ.
ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಸುವ ಕಾರ್ಯದಿಂದ, ಬೀದಿ ನಾಯಿಗಳ ನಿಖರವಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೆ ಬೀದಿ ನಾಯಿಗಳಿಗೆ ಮತ್ತೆ-ಮತ್ತೆ ಲಸಿಕೆ ಹಾಕುವುದನ್ನು ತಡೆಯಬಹುದಾಗಿರುತ್ತದೆ.
BREAKING: ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ | Actor Darshan
ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!