ಬೆಂಗಳೂರು: ನಗರದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಚರಣೆ ಸಂಬಂಧ ಬಿಬಿಎಂಪಿಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅಲ್ಲದೇ ಗಣೇಶ ಮೂರ್ತಿಗಳ ವಿಸರ್ಜನೆಗೂ ಸ್ಥಳ ನಿಗದಿಗೊಳಿಸಿ ಆದೇಶಿಸಲಾಗಿದೆ.
ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ಬಿಡುಗಡೆ ಮಾಡಿದ್ದು, ನಗರಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬರುವ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಣೇಶ ಚತುರ್ಥಿ ಆಚರಣೆ ಸಂಬಂಧ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣೇಶೋತ್ಸವ ಆಚರಣೆಗೆ ಅನುಕೂಲವಾಗುವ ದೃಷ್ಟಿಯಿಂದ ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯನ್ನೊಳಗೊಂಡ ಅಧಿಕಾರಿಗಳು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ನೀಡುವ ವ್ಯವಸ್ಥೆ ಕಲ್ಪಿಸಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಂದAತಹ ಅರ್ಜಿಗಳನ್ನು ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಲು ಸೂಚನೆ ನೀಡಿದರು.
ನಗರದಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಪ್ರಮುಖ ಕಲ್ಯಾಣಿಗಳಾದ ಹಲಸೂರು, ಯಡಿಯೂರು, ಸ್ಯಾಂಕಿ, ಹೆಬ್ಬಾಳ ಸೇರಿದಂತೆ ಇನ್ನಿತರೆ ಪ್ರಮುಖ ಕಲ್ಯಾಣಿಗಳನ್ನು ಸ್ವಚ್ಛತೆ ಮಾಡಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಕಲ್ಯಾಣಿಗಳ ಬಳಿ ಪ್ರತ್ಯೇಕ ತಂಡಗಳನ್ನು ನಿಯೋಜಿಸಿಕೊಳ್ಳಿ ಹಾಗೂ ನುರಿತ ಈಜುಗಾರರಿರಬೇಕು. ಮುಂಜಾಗ್ರತಾ ಕ್ರಮವಾಗಿ Sಆಖಈ ಹಾಗೂ ಈiಡಿe ಆeಠಿಚಿಡಿಣmeಟಿಣ ಇಲಾಖೆಗೆ ಅಗ್ನಿಶಾಮಕ ವಾಹನ ಹಾಗೂ ಅಗತ್ಯ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲು ಕೂಡಲೆ ಪತ್ರ ಬರೆಯಕು ಯೋಜನಾ ವಿಭಾಗದ ವಿಶೇಷ ಆಯುಕ್ತರಿಗೆ ಸೂಚನೆ ನೀಡಿದರು.
ಶಿವಮೊಗ್ಗ: ಆ.28, 29ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ವೇಳೆ ಗಣೇಶ ಮೂರ್ತಿಗಳಿಗೆ ಯಾವುದೇ ರೀತಿಯ ವಿಘ್ನ/ಲೋಪವಾಗದಂತೆ ವಿಸರ್ಜಿಸಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಿ. ವಿಸರ್ಜನಾ ಸ್ಥಳದಲ್ಲಿ ಭದ್ರತಾ ಧೃಷ್ಟಿಯಿಂದ ಪಾಲಿಕೆ ಅಧಿಕಾರಿಗಳು/ಮಾರ್ಷಲ್ ಗಳ ನಿಯೋಜನೆ, ಬ್ಯಾರಿಕೇಡಿಂಗ್, ದೀಪಗಳ ಅಳವಡಿಕೆ, ಸಿಸಿ ಟಿವಿ, ಕ್ರೇನ್ ಸೇರಿದಂತೆ ಇನ್ನಿತರೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
ಕಲ್ಯಾಣಿಗಳ ವ್ಯವಸ್ಥೆ ಇಲ್ಲದಿರುವ ಕಡೆ ಹೆಚ್ಚುವರಿಯಾಗಿ ತಾತ್ಕಾಲಿಕ ಮೊಬೈಲ್ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ತೆರಳುವ ಮಾರ್ಗದಲ್ಲಿ ವಿದ್ಯುತ್ ದೀಪಗಳು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ವಿಸರ್ಜನಾ ಸ್ಥಳದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಘನತ್ಯಾಜ್ಯ ವಿಭಾಗದಿಂದ ತ್ವರಿತವಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದರು.
BIGG BREAKING NEWS: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ10,256 ಹೊಸ ಪ್ರಕರಣಗಳು ಪತ್ತೆ, 68 ಸಾವು
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿಲು 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳು ಹಾಗೂ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಲುವಾಗಿ 421 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಮತ್ತು 37 ತಾತ್ಕಾಲಿಕ ಕಲ್ಯಾಣಿಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಸದರಿ ಮಾಹಿತಿಗಳ ವಿವರಗಳ ಪಟ್ಟಿಗಳ ಪ್ರತಿಯನ್ನು ಲಗತ್ತಿಸಿದೆ.
ಸಭೆಯಲ್ಲಿ ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಆಡಳಿತದ ವಿಭಾಗದ ಉಪ ಆಯುಕ್ತರು, ಮುಖ್ಯ ಅಭಿಯಂತರರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.