ಬೆಂಗಳೂರು : ಕೊರೊನಾ ಭೀತಿ ಹಿನ್ನೆಲೆ ಬೆಂಗಳೂರಿನಲ್ಲಿ ಬಿಬಿಎಂಪಿ ಅಲರ್ಟ್ ಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಭೆ ಮೇಲೆ ಸಭೆ ನಡೆಸುತ್ತಿದೆ.
ಇಂದು ಬೃಹತ್ ಮಹಾನಗರ ಪಾಲಿಕೆ ಪಬ್ , ಕ್ಲಬ್ ಅಂಡ್ ಬಾರ್ ಅಸೋಸಿಯೇಷನ್ ಜೊತೆ ಮಹತ್ವದ ಸಭೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೊನಾ ಹಿನ್ನೆಲೆ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು, ಹೋಟೆಲ್, ಪಬ್ ಹಾಗೂ ಬಾರ್ ಗಳಲ್ಲಿ ಸಿಬ್ಬಂದಿಗಳು ಗ್ರಾಹಕರ ಜೊತೆ ವ್ಯವಹರಿಸುವಾಗ ಯಾವೆಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಭೆ ನಡೆಸಲಿದೆ.
ಇಂದು ಮಧ್ಯಾಹ್ನ ಬಿಬಿಎಂಪಿ ಪಬ್ , ಕ್ಲಬ್ ಅಂಡ್ ಬಾರ್ ಅಸೋಸಿಯೇಷನ್ ಜೊತೆ ಸಭೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ, ಚೀನಾ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದಂತೆ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಕುರಿತು ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಮಾಸ್ಕ್ ಕಡ್ಡಾಯಗೊಳಿಸುವ ಪರಿಸ್ಥಿತಿ ಬಂದರೆ ಖಂಡಿತ ಮಾಡುತ್ತೇವೆ, ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಜನರು ಇದಕ್ಕೆ ಅವಕಾಶ ಕೊಡಬಾರದು, ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ.
ಕೊರೊನಾ ಮಾರ್ಗಸೂಚಿ ಪಾಲಿಸದಿದ್ದರೆ ಬೆಂಗಳೂರಿನಲ್ಲಿ ‘ಕಠಿಣ ನಿಯಮ’ ಜಾರಿಗೆ ತರಲಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಜನರು ಸರಿಯಾಗಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು, ಇಲ್ಲವಾದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಬೇಕಾಗುತ್ತದೆ, ಮಾಸ್ಕ್ ಕಡ್ಡಾಯವಾಗಿ ಧರಿಸಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ ಎಂದು ಸೂಚನೆ ನೀಡಿದರು.ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
BIGG NEWS: ಬೆಳಗಾವಿ ಚಳಿಗಾಲ ಅಧಿವೇಶನದ ಐದನೇ ದಿನವೂ ತಟ್ಟಿದ ಪ್ರತಿಭಟನೆಯ ಕಾವು