ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯಯುಕ್ತರಾದ ಶ್ರೀ ಮುನೀಶ್ ಮೌದ್ಗಿಲ್ ರವರು ತಿಳಿಸಿದರು.
ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಕ್ರಮವಹಿಸಲಾಗುತ್ತಿದೆ.
ಅದರಂತೆ, ಎಲ್ಲಾ ಪರಿಷ್ಕರಣೆ ಪ್ರಕರಣಗಳಲ್ಲಿ, ಆಸ್ತಿಗಳಿಗೆ ಬೀಗಮುದ್ರೆ, ಮುಟ್ಟುಗೋಲು ಮತ್ತು ಜಪ್ತಿ ಮಾರಾಟವನ್ನು ಬಳಸಿಕೊಂಡು ವಸೂಲಾತಿ ಮಾಡಬೇಕಿದೆ. ಈ ಸಂಬಂಧ 1ನೇ ಜನವರಿ 2025 ರಿಂದ 9ನೇ ಜನವರಿ 2025 ರವರೆಗೆ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಂತಹ 830 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿದೆ.
ಕಳೆದ 24 ಗಂಟೆಗಳಲ್ಲಿ ಎಲ್ಲಾ 08 ವಲಯಗಳು ಸೇರಿದಂತೆ 182 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer
ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ‘ಸ್ವರ್ಣ ಪ್ರಾಶನ’ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಇಲ್ಲಿದೆ ಮಾಹಿತಿ