ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಕಂದಾಯ ಪರಿವೀಕ್ಷಕರಾದ ಕವಿತ ರವರುನ್ನು ಅಮಾನತ್ತುಗೊಳಿಸಲಾಗಿದೆ.
ಪೂರ್ವ ವಲಯದ ವಸಂತನಗರ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ಕವಿತ ಅವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಈ ಹಿಂದೆ ಕರ್ತವ್ಯ ಲೋಪವೆಸಗಿದ ಮೂವರ ಅಮಾನತ್ತು
ಈ ಹಿಂದೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಮೂರು ಜನ ಬಿಬಿಎಂಪಿ ನೌಕರರನ್ನು ಅಮಾನತುಗೊಳಿಸಲಾಗಿತ್ತು.
ಹೆಚ್.ಬಿ.ಆರ್ ಲೇಔಟ್ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಪರಿವೀಕ್ಷಕರಾದ ರಮೇಶ್, ಕಂದಾಯ ವಸೂಲಿಗಾರರಾದ ಪೆದ್ದುರಾಜು ಹಾಗೂ ಕೆಂಗೇರಿ ಉಪ ವಿಭಾಗ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ವಸೂಲಿಗಾರರಾದ ಸಿ. ಸಂದಿಲ್ ಕುಮಾರ್ ಅವರನ್ನು ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿತ್ತು
BREAKING: MLC ಎನ್.ರವಿಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್: ಜು.8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆದಂತೆ ಆದೇಶ
ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರವೇ ಟಿಕೆಟ್ ದರದ ‘ರೌಂಡಪ್ ವ್ಯವಸ್ಥೆ’ ರದ್ದು