ಬೆಂಗಳೂರು: ನಗರದ ಜನತೆಯ ಅನುಕೂಲಕ್ಕಾಗಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು, ಬಿಬಿಎಂಪಿಯಿಂದ 462 ಮೊಬೈಲ್ ಟ್ಯಾಂಕ್ ವ್ಯವಸ್ಥೆಯನ್ನು ಮಾಡಲಾಗಿದೆ.
ಈ ಬಗ್ಗೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗನ್ನು ತೆರೆಯಲಾಗಿದೆ ಎಂದಿದೆ.
ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.
ಮುಂದುವರಿದು, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಪಾಲಿಕೆ ವೆಬ್ ಸೈಟ್ ಲಿಂಕ್ https://apps.bbmpgov.in/ganesh2024/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ
ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’