ಬೆಂಗಳೂರು: ನಗರದಲ್ಲಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಸಂಬಂಧ ಕಾಂಗ್ರೆಸ್ ನೀಡಿರುವಂತ ದೂರಿನ ಹಿನ್ನಲೆಯಲ್ಲಿ, ಈಗ ತನಿಖೆ ಚುರುಕುಗೊಂಡಿದೆ. ಇಂದು (ನ.24) ಕೇಂದ್ರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ಬಿಬಿಎಂಪಿಯ ಚುನಾವಣಾ ವಿಶೇಷ ಆಯುಕ್ತರು, ಬಿಬಿಎಂಪಿ ಮತದಾರರ ನೋಂದಣಾಧಿಕಾರಿಗಳಿಗೆ ಪತ್ರದಲ್ಲಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಇಂದು ಕೇಂದ್ರ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬಿಬಿಎಂಪಿ ಮತದಾರರ ನೋಂದಣಾಧಿಕಾರಿಗಳ ಕಚೇರಿಗೂ ಭೇಟಿ ನೀಡಲಿದ್ದಾರೆ ಎಂದು ಸೂಚಿಸಿದ್ದಾರೆ.
ಇದಲ್ಲದೇ ಜೂನ್.13ರಿಂದ ಈವರೆಗೆ ಮತದಾರರ ಪಟ್ಟಿಗೆ ಸೇರ್ಪಡೆ, ಡಿಲೀಟ್, ತಿದ್ದುಪಡಿ ದಾಖಲೆಗಳನ್ನು ಪರಿಶೀಲನೆ ನಡೆಸಲಿದ್ದಾರೆ. ಆ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಇರುವಂತೆ ಬಿಬಿಎಂಪಿಯ ಚುನಾವಣಆಧಿಕಾರಿಗಳಿಗೂ ಸೂಚಿಸಿದ್ದಾರೆ. ಹೀಗಾಗಿ ಬೆಂಗಳೂರಿನ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿನ ಅಕ್ರಮ ಸಂಬಂಧದ ತನಿಖೆಯ ಚುರುಕುಗೊಂಡಂತೆ ಆಗಿದೆ.
BIGG NEWS : ‘ಕರ್ನಾಟಕದ ಒಂದಿಂಚೂ ಜಾಗ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ’ : ಸಿಎಂ ಬೊಮ್ಮಾಯಿ ಗುಡುಗು
ಕರಾವಳಿಯಲ್ಲಿ ‘ಧರ್ಮ ದಂಗಲ್’ : ಕುಕ್ಕೆ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ