ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಕಾಂಗ್ರೆಸ್ ಮಾಡಿರುವ ಆರೋಪ ರಾಜ್ಯದಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ವಿಪಕ್ಷಗಳು ರಾಜ್ಯ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಈ ಹಿನ್ನೆಲೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಎತ್ತಂಗಡಿ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನೀಡಿ ಸಂಕಷ್ಟಕ್ಕೆ ತುತ್ತಾಗಿರುವ ಸರ್ಕಾರ ಇದರಿಂದ ಪಾರಾಗಲು ಕೂಡಲೇ ಮುಖ್ಯ ಆಯುಕ್ತರನ್ನು ಎತ್ತಂಗಡಿ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಈ ಸಂಬಂಧ ತುಷಾರ್ ಗಿರಿನಾಥ್ ಅವರನ್ನು ಸರ್ಕಾರ ತರಾಟೆಗೆ ತೆಗೆದುಕೊಂಡಿದ್ದು, ಯಾವುದೇ ಸಂದರ್ಭದಲ್ಲಾದರೂ ಆಯುಕ್ತರ ತಲೆದಂಡವಾಗುವ ಸಾಧ್ಯತೆ ಎನ್ನಲಾಗುತ್ತಿದೆ.