Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ
KARNATAKA

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರದಿಂದಿರಿ: ಶಾಸಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಲಹೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಬಿಡುಗಡೆ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವ ಬಗ್ಗೆ ಕೇಳಿದಾಗ, “ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ” ಎಂದರು.

ಪಕ್ಷದಲ್ಲಿ ಶಿಸ್ತು ಮುಖ್ಯ

ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಇದು ಸಂದೇಶವೇ ಎಂದು ಕೇಳಿದಾಗ, “ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ” ಎಂದರು.

ಜಮೀರ್ ಅವರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ನನಗೆ ಮಾಹಿತಿ ಇಲ್ಲ”

ಚೆನ್ನೈಗೆ ಮತ್ತೆ ಪ್ರಯಾಣ ಮಾಡುತ್ತೀರಾ ಎಂದು ಕೇಳಿದಾಗ, “ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದು, ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮವಿದೆ” ಎಂದರು.

ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಶಾಸಕರೊಂದಿಗೆ ಚರ್ಚೆ

ನೀವು ಶಾಸಕರನ್ನು ಒಬ್ಬೊಬ್ಬರನ್ನೇ ಕರೆದು ಚರ್ಚೆ ಮಾಡುತ್ತಿದ್ದೀರಿ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ರಾಜಕಾರಣ ಮಾಡುವಾಗ ನಾವು ನಮ್ಮ ಶಾಸಕರ ಜತೆ ಚರ್ಚೆ ಮಾಡಿ ಭವಿಷ್ಯ ರೂಪಿಸುವ ಬಗ್ಗೆ ಚರ್ಚೆ ಮಾಡಬೇಕಲ್ಲವೇ. ಯಾರಿಗೆ ಏನು ಹೇಳಬೇಕು, ಯಾರಿಗೆ ಯಾವ ಮಾರ್ಗದರ್ಶನ ನೀಡಬೇಕು ಮಾಡುತ್ತೇವೆ. ಪಾಲಿಕೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ ಮಾಡುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಈ ಕೆಲಸ ನಾನು ಮಾಡದೇ ಬೇರೆ ಯಾರು ಮಾಡುತ್ತಾರೆ? ಇನ್ನು ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಏನಾಗಿದೆ ಎಂದು ಶಾಸಕರು ವರದಿ ನೀಡುತ್ತಿದ್ದಾರೆ” ಎಂದು ತಿಳಿಸಿದರು.

ಎಚ್ಚರವಾಗಿರಲು ಶಾಸಕರಿಗೆ ಸಲಹೆ

ಶಾಸಕರಿಗೆ ನೇರವಾಗಿ ಎಚ್ಚರಿಕೆ ನೀಡಿರುವ ಬಗ್ಗೆ ಕೇಳಿದಾಗ, “ಶಾಸಕರು ದೆಹಲಿಗೆ ಹೋಗಿರುವುದು, ಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಅವರು ತಮ್ಮ ಬೇಡಿಕೆ ಕೇಳಲಿ. ಆದರೆ ಪಕ್ಷಕ್ಕೆ ಶಿಸ್ತಿನಿಂದ ಇರಬೇಕು ಅಷ್ಟೇ. ಅವರೆಲ್ಲರೂ ನಮ್ಮ ಸಹೋದ್ಯೋಗಿಗಳು. ಹೀಗಾಗಿ ಅವರಿಗೆ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದೇನೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದೇನೆ” ಎಂದರು.

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.