ಬೆಳಗಾವಿ : ಉದ್ಯೋಗಾಂಕ್ಷಿಗಳಿಗೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ( Murugesh Nirani ) ಸಿಹಿಸುದ್ದಿ ನೀಡಿದ್ದು, ಉದ್ಯಮಿಯಾಗು—ಉದ್ಯೋಗ ನೀಡು ವಿಶೇಷ ಕಾರ್ಯಾಗಾರ ವನ್ನು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಮಂಗಳವಾರ ಅಧಿವೇಶನದಲ್ಲಿ ಮಾತನಾಡಿದ ಸಚಿವರು ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮ ಸ್ಥಾಪಿಸಿ ಉದ್ಯೋಗ ಕೊಡುವಂತಾಗಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಗಾರ ಆರಂಭಿಸಲಾಗುತ್ತದೆ. ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ, ಇದರಲ್ಲಿ 50 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿಯಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಂಡವಾಳ ಹೂಡಿಕೆ ಸಮಾವೇಶದಿಂದ ಯಾವುದೇ ಅನುಕೂಲ ಆಗುತ್ತಿಲ್ಲ, ಇದರಿಂದ ಲಾಭ ಆದರೂ ಏನು ಎಂಬ ಕಾಂಗ್ರೆಸ್ ನಾಯಕರ ಪ್ರಶ್ನೆಗೆ ಸಚಿವ ಮುರುಗೇಶ್ ನಿರಾಣಿ ಉತ್ತರ ನೀಡಿದರು. ಬಂಡವಾಳ ಹೂಡಿಕೆ ಸಮಾವೇಶದಿಂದ 6 ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿಯಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ನವೆಂಬರ್ನಲ್ಲಿ ನಡೆದ ಬಂಡವಾಳ ಹೂಡಿಕೆ ಸಮಾವೇಶದಲ್ಲಿ 9,81,784 ಕೋಟಿ ಹೂಡಿಕೆ ಆಗಿದೆ. ಈ ಬಾರಿಯ ಸಮಾವೇಶದಿಂದ 6 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. 75% ಬಂಡವಾಳ ಹೂಡಿಕೆ ಆಗೋಕೆ ಸರ್ಕಾರ ಕ್ರಮವಹಿಸಿದೆ ಎಂದರು.
‘ರಾಜ್ಯದ ಹಿತರಕ್ಷಣೆಗೆ ನಾವು ಬದ್ಧ’ : ಸಿಎಂ ಬೊಮ್ಮಾಯಿ ಟ್ವೀಟ್ |Basavaraj Bommai
GOOD NEWS : ಬಂಡವಾಳ ಹೂಡಿಕೆ ಸಮಾವೇಶದಿಂದ ರಾಜ್ಯದಲ್ಲಿ 6 ಲಕ್ಷ ಹುದ್ದೆ ಸೃಷ್ಟಿ : ಸಚಿವ ಮುರುಗೇಶ್ ನಿರಾಣಿ