ಬೀದರ್: ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಗಾಡಿವಾನ ಓಣಿಯಲ್ಲಿ ಮನೆಯ ಮುಂದಿನ ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಆಸ್ಮಾ ಸಮೀರ ಶೇಖ್ (2) ಮಗು ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಮೇಲೆರಗಿದ ಬೀದಿ ನಾಯಿ ಮುಖ ಹಾಗೂ ದೇಹದ ಹಲವು ಕಡೆ ಕಚ್ಚಿ ಗಾಯಗೊಳಿಸಿದೆ. ಬಾಲಕಿ ಚೀರಾಡುತ್ತಿದ್ದಂತೆ ಓಡಿ ಬಂದು ಪೋಷಕರು ರಕ್ಷಣೆ ಮಾಡಿದ್ದಾರೆ. ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡ ಮಗುವಿಗೆ ವೈದ್ಯರು 36ಕ್ಕೂ ಹೆಚ್ಚು ಹೊಲಿಗೆ ಹಾಕಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.