ಬೆಳಗಾವಿ : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ದುರಂತದ ಬೆನ್ನಲ್ಲೇ ಇದೀಗ ಬೆಳಗಾವಿಯ ಬಿಮ್ಸ್ ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಸಾವನ್ನಪ್ಪಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.
ಬೆಳಗಾವಿಯಲ್ಲಿ ಕಳೆದ 6 ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ಶಿಶುಗಳು ಮೃತಪಟ್ಟಿದ್ದು, ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. 2024 ರ ಏಪ್ರೀಲ್ ನಿಂದ ಅಕ್ಟೋಬರ್ ವರೆಗೆ ಜಿಲ್ಲೆಯಲ್ಲಿ 29 ಬಾಣಂತಿಯರ ಸಾವಾಗಿದೆ.
ಹೆರಿಗೆಯ ಸಮಯದಲ್ಲಿ ತೀವ್ರ ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಸೇರಿ ಹಲವು ಕಾರಣಗಳಿಂದ ಬೆಳಗಾವಿ ಜಿಲ್ಲೆಯಲ್ಲಿ 6 ತಿಂಗಳಲ್ಲಿ 29 ಬಾಣಂತಿಯರ ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಹೇಳಿಕೊಂಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸರಣಿ ಸಾವಿನ ಪ್ರಕರಣವನ್ನು ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.