ಬೆಳಗಾವಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾಹಿತಿ ನೀಡಿದ್ದಾರೆ.
ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ ಡೋಕರೆ ಎಂಬಾತನನ್ನು ಬೆಳಗಾವಿ ಗ್ರಾಮೀಣಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಿಣೈ ಗ್ರಾಮದ ತಿಪ್ಪಣ ಎಂಬಾತ ಮೂರು ವರ್ಷದಿಂದ ಅದೇ ಗ್ರಾಮದ ಯುವತಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಯುವತಿ ಬಿಕಾಂ ಓದುತ್ತಿದ್ದು, ನಿತ್ಯ ಕಾಲೇಜಿಗೆ ಹೋಗುವಾಗಲೂ ಮದುವೆಯಾಗುವಂತೆ ರೇಗಿಸುತ್ತಿದ್ದ. ಇದರಿಂದ ಬೇಸತ್ತ ಯುವತಿ ಓದು ನಿಲ್ಲಿಸಿದ್ದಾಳೆ. ಆದರೂ ತಿಪ್ಪಣ ಮನೆಗೆ ಹೋಗಿ ಯುವತಿ ತಾಯಿಗೂ ಬೆದರಿಕೆ ಹಾಕಿದ್ದಾನೆ.
ಕಳೆದ ಕೆಲ ದಿನಗಳ ಹಿಂದೆ ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ತಿಪ್ಪಣ್ಣ, ಮನೆ ಹಿಂಬಾಗಿಲಿನಲ್ಲಿ ಬೆಂಕಿ ಹಚ್ಚಿ ಪರಾರಿಯಾಗಿದ್ದ. ಇದರಿಂದ ರೋಸಿ ಹೋದ ಕುಟುಂಬ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಮತ್ತೆ ತಿಪ್ಪಣ ಯುವತಿಗೆ ಪ್ರೀತಿಸದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.