ಬೆಳಗಾವಿ : ಆಸ್ಪತ್ರೆಯವರು, ಸಂಬಳ ನೀಡದೇ ಸತಾಯಿಸುತ್ತಿದ್ದರಿಂದ ನೊಂದ ಆಂಬುಲೆನ್ಸ್ ಚಾಲಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರ ಠಾನೆ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಚಾಲಕನನ್ನು ಓಂಕಾರ್ ಪವಾರ್ (25) ಎಂದು ತಿಳಿದುಬಂದಿದೆ.ಈತ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸಂಬಳ ನೀಡದೇ ಆಸ್ಪತ್ರೆಯವರು ಸತಾಯಿಸುತ್ತಿದ್ದರು.ಹಲವು ಬಾರಿ ಮನವಿ ಮಾಡಿದರೂ ನಿರ್ಲಕ್ಷ್ಯ ಮಾಡಿದ್ದರು.
ಇದರಿಂದ ನೊಂದ ಓಂಕಾರ್, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಆತ್ಮಹತ್ಯೆಗೆ ಶರಣಾಗಿರುವ ಓಂಕಾರ್ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.