ಬೆಳಗಾವಿ : ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷನ ಪುತ್ರನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರತಾಪ್ ರಾವ್ ಪಾಟೀಲ್ ಪುತ್ರ ಶಿವರಾಜ್ ಸೇರಿದಂತೆ 35 ಜನರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ ನಡೆಸಿದ್ದಾರೆ.
ಹಲ್ಲೆ ಪ್ರಕರಣದಲ್ಲಿ ಶಿವರಾಜ್ ಪಾಟೀಲ್ A1ಆರೋಪಿ ಆಗಿದ್ದಾರೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಇಟ್ನಾಳದಲ್ಲಿ ಈ ಒಂದು ಘಟನೆ ನಡೆದಿದ್ದು ಅಕ್ಟೋಬರ್ 6 ರಂದು ನಡೆದ ಘಟನೆ ತಡವಾಗಿ ಬಳಕೆಗೆ ಬಂದಿದೆ. ಇಟ್ನಾಳ್ ಗ್ರಾಮದ ಸರ್ವೆ ನಂಬರ್ 43/6 ಮತ್ತು 202/2 ಜಮೀನು ವಿಚಾರಕ್ಕೆ ಗಲಾಟೆ ನಡೆದಿದೆ.
ಸದ್ಯಕ್ಕೆ ಇಬ್ಬರು ಆರೋಪಿಗಳನ್ನು ಮಾತ್ರ ಹಾರೋಗೇರಿ ಪೊಲೀಸ್ರು ಬಂಧಿಸಿದ್ದಾರೆ A1 ಆರೋಪಿ ಸರಿ ಪ್ರಮುಖ ಆರೋಪಿಗಳು ಬಂಧನಕೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಗೋಕಾಕ್ ಆಸ್ಪತ್ರೆಯಲ್ಲಿ ಸದ್ಯ ಮಹಿಳೆ ಮತ್ತು ವೃದ್ಧ ಚಿಕಿತ್ಸೆ ಪಡೆಯುತ್ತಿದ್ದಾರೆ.