ಬೆಂಗಳೂರು : ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟು ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ. ಮಹಾರಾಷ್ಟ್ರ ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ ಎಂದಿದ್ದಾರೆ.
ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ ಎಂದಿದ್ದಾರೆ.
ಮಹಾರಾಷ್ಟ್ರ ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ.
3/3— Basavaraj S Bommai (@BSBommai) November 23, 2022
ಕರಾವಳಿಯಲ್ಲಿ ‘ಧರ್ಮ ದಂಗಲ್’ : ಕುಕ್ಕೆ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ
BIGG NEWS : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಹೊಸ ವರ್ಷದಿಂದ ಎಲ್ಲಾ ಆಸ್ಪತ್ರೆಗಳಲ್ಲಿ ‘ಕ್ಯಾಶ್ ಲೆಸ್’ ಚಿಕಿತ್ಸೆ