ಬೆಂಗಳೂರು : ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ( Basavaraj Bommai ) ಹೇಳಿದರು.
ಬೆಳಗಾವಿ ಗಡಿ ವಿವಾದದ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದೇನೆ ವಿವಾದ ಸಂಬಂಧ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ಕಾಪಾಡಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ ಎಂದರು., ಮಹಾರಾಷ್ಟ್ರ ಡಿಜಿಪಿ ಹಾಗೂ ಬೆಳಗಾವಿ ಜಿಲ್ಲೆಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಕೂಡ ಚರ್ಚೆ ನಡೆದಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಕುರಿತು ಮಹಾರಾಷ್ಟ್ರ ಸರ್ಕಾರದ ಜೊತೆ ಚರ್ಚಿಸಿದ್ದೇನೆ , ಯಾರಿಗೂ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.
ಗಡಿ ವಿವಾದದ ಕುರಿತು ಸಿಎಂಗೆ ಕರವೇ ಪತ್ರ
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದು, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ದೌರ್ಜನ್ಯವೆಸಗಲಾಗುತ್ತಿದೆ. ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ದಾಳಿಗಳಾಗುತ್ತಿವೆ. ವಿಧ್ವಂಸಕ ಕೃತ್ಯಗಳನ್ನು ಎಸಗಲಾಗುತ್ತಿದೆ. ಕನ್ನಡಿಗರ ಮೇಲಿನ ದಾಳಿ-ದೌರ್ಜನ್ಯಗಳು ಭಯೋತ್ಪಾದನೆಗೆ ಸಮನಾದ ಹೇಯಕೃತ್ಯಗಳಾಗಿರುತ್ತವೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತದೆ, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ .
ಗುಜರಾತ್ ನಲ್ಲಿ ‘ಬಿಜೆಪಿ’ ಭರ್ಜರಿ ಜಯಭೇರಿ : ಟ್ವೀಟ್ ನಲ್ಲಿ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ
BREAKING NEWS : ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ ಸಾಧ್ಯತೆ : ಹೈ ಅಲರ್ಟ್, ಪೊಲೀಸ್ ಬಂದೋಬಸ್ತ್