ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಣ್ಣ, ತಂಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಬಳಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ-18 ರಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಅಣ್ಣ, ತಂಗಿ ಸಾವನ್ನಪ್ಪಿದ್ದು, ಮತ್ತೊಂದು ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದ ಅಡಿವೆಪ್ಪ ಬಡಿಗೇರ (34), ಸಹೋದರಿ ಭಾಗ್ಯಶ್ರೀ ನವಿನ್ ಕಂಬಾರ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಗೋಕಾಕದ ಉಮರಾಣಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.