ಬೆಳಗಾವಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಹೋರಾಟಕ್ಕೆ ಕರೆ ನೀಡಲಾಗಿತ್ತು. ಈ ಹೋರಾಟಕ್ಕೆ ಅನುಮತಿ ನೀಡುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿತ್ತು. ಆದರೇ ಆರಂಭದಲ್ಲಿ ಅನುಮತಿಗೆ ನಿರಾಕರಿಸಿದ್ದಂತ ಬೆಳಗಾವಿ ಜಿಲ್ಲಾಡಳಿತ, ಇದೀಗ ಕೊನೆಗೂ ಅನುಮತಿ ನೀಡಿದೆ.
ಇಂದು ಮಧ್ಯಾಹ್ನ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಇತರೆ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಡಳಿತದಿಂದ ತುರ್ತು ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಸಂಧಾನ ಯಶಸ್ವಿಯಾದ ಬಳಿಕ, ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಪಂಚಸಾಲಿ ಹೋರಾಟಕ್ಕೆ ಅನುಮತಿ ನೀಡಿದ್ದಾರೆ.
ಅಂದಹಾಗೇ ಪಂಚಮಸಾಲಿ ಹೋರಾಟದ ಪ್ರತಿಭಟನೆಯ ವೇಳೆಯಲ್ಲಿ ಟ್ರ್ಯಾಕ್ಟರ್ ಬಳಕೆ ಮಾಡದಿರಲು ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ. ಟ್ರ್ಯಾಕ್ಟರ್ ಬದಲು ಕ್ರೂಸರ್ ವಾಹನ ಬಳಸೋದಕ್ಕೆ ಅನುಮತಿ ನೀಡಲಾಗಿದೆ. ಅಲ್ಲದೇ ಸಾರ್ವಜನಿಕರಿಗೆ ತೊಂದರೆ ಆಗದಂತೆ ಪ್ರತಿಭಟನೆ ಮಾಡಲು ಜಿಲ್ಲಾಡಳಿತ ಮನವಿ ಮಾಡಿದ ಕಾರಣ, ಅದಕ್ಕೂ ಆಯ್ತು ಎಂದಿದ್ದಾರೆ.
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut
Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ