ಬೆಳಗಾವಿ : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ರ್ಯಾಕ್ಟರ್ಗೆ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹೌದು ಈ ಒಂದು ಘಟನೆ ಬೆಳಗಾವಿ ತಾಲೂಕಿನ ಸುವರ್ಣ ವಿಧಾನಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕ್ಯಾಂಟರ್ ವಾಹನ ಮತ್ತು ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ (41) ಎಂಬ ರೈತ ಮೃತಪಟ್ಟಿದ್ದಾರೆ.
ಬೆಳಗಾವಿ ಮಾರ್ಕೆಟ್ಗೆ ಕೊತ್ತುಂಬರಿ ಸೊಪ್ಪು ಸಾಗಿಸಲು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ರಭಸವಾಗಿ ಟ್ರ್ಯಾಕ್ಟರ್ಗೆ ಗುದ್ದಿದೆ. ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.