ಬೆಳಗಾವಿ : ಜಮೀನಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯ ಮಾರಾಮಾರಿ ನಡೆದಿದ್ದು ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಎಂಬ ಗ್ರಾಮದಲ್ಲಿ ನಡೆದಿದೆ.
ಹೌದು ಆಸ್ತಿ ವಿವಾದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ಮಧ್ಯ ಮಾರಾಮಾರಿ ನಡೆದಿದೆ. ಕಟ್ಟಿಗೆ ಕುಡುಗೋಲಿನಿಂದ ಎರಡು ಕುಟುಂಬದವರು ಬಡಿದಾಡಿಕೊಂಡಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಬಳಿ ಜಮೀನಿನಲ್ಲಿ ಎರಡು ಕುಟುಂಬದವರು ಗಲಾಟೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾಕತಿ ನಿವಾಸಿ ಅನಿಲ್ ಮುಂಗಾರಿ ಸೇರಿದಂತೆ ಏಳು ಜನರ ಮೇಲೆ ಹಲ್ಲೆ ಮಾಡಲಾಗಿದೆ. ಗ್ರಾಮದ ನಿವಾಸಿ ಸಿದ್ದರಾಯಿ ತುಂಬರಿ ಎಂಬವರಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯವಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೂಂಡಾಗಳನ್ನು ಕರೆಸಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಅನಿಲ್ ಗೆ ಸೇರಿದ ಜಮೀನನ್ನು ಲಪಟಾಯಿಸಲು ಸಿದ್ದರಾಯಿ ಪ್ಲಾನ್ ಮಾಡಿದ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿದ್ದರು ಜಮೀನು ಬಿಟ್ಟುಕೊಡಲು ಒತ್ತಾಯ ಮಾಡಿದ್ದ ಇದಕ್ಕೆ ಒಪ್ಪದಿದ್ದಾಗ ಅನಿಲ್ ಮುಂಗಾರಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಲಾಗಿದೆ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ