ಬೆಳಗಾವಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಎಂಇಎಸ್ ಕಿರಿಕ್ ತೆಗೆದಿದ್ದು, ಕರ್ನಾಟಕದ ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.
ಚುನಾವಣೆ ಹೆಸರಿನಲ್ಲಿ ಎಂಇಎಸ್ ಅಭ್ಯರ್ಥಿಗಳು ನಾಡದ್ರೋಹಿ ಘೋಷಣೆ ಕೂಗಿದ್ದು, ಬೆಳಗಾವಿ, ಕಾರವಾರ, ನಿಪ್ಪಾಣಿ, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ನಾಡದ್ರೋಹಿ ಘೋಷಣೆ ಕೂಗಿದ್ದಾರೆ.
ಎಂಇಎಸ್ ಅಭ್ಯರ್ಥಿಗಳಾದ ನಿರಂಜನ್ ಸರದೇಸಾಯಿ, ಮಹಾದೇವ ಪಾಟೀಲ್ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ನಿರಂಜನ ಸರದೇಸಾಯಿ ಉತ್ತರ ಕನ್ನಡದ ಎಂಇಎಸ್ ಅಭ್ಯರ್ಥಿಯಾಗಿದ್ದರೆ, ಮಹಾದೇವ ಪಾಟೀಲ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.