ಬೆಳಗಾವಿ : ಸದ್ಯ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಒಂದೆಡೆ ರೈತರಿಗೆ ಖುಷಿಯಾಗಿದ್ದರೆ, ಇನ್ನೊಂದಡೆ ಹಲವು ರೈತರು ಅತಿಯಾದ ಮಳೆಯಿಂದ ಬೆಳೆ ನಾಶವಾಗಿ ಸಂಕಷ್ಟಕ್ಕೆ ಈಡಾಗಿದ್ದಾರೆ. ಅಲ್ಲದೆ ಅತಿಯಾದ ಮಳೆಯಿಂದ ಹಲವು ಕಡೆ ಅವಾಂತರ ಸೃಷ್ಟಿಯಾಗಿದ್ದು ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಪಕ್ಕದ ಮನೆ ಗೋಡೆಗೋಸಿದ್ದು ವ್ಯಕ್ತಿ ಸಾವನ ಪರವಾಗಿ ನಡೆದಿದೆ.
ಹೌದು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಪಕ್ಕದ ಮನೆ ಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿ ನಗರದ ತಿರುಪತಿ ಹತ್ಕರ (45) ಮೃತರು ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿ ತಗಡಿನ ಶೆಡ್ನಲ್ಲಿ ವಾಸವಿದ್ದರು. ಶನಿವಾರ ತಡರಾತ್ರಿ ಪಕ್ಕದ ಮನೆ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇನ್ನುಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಿಪ್ಪಾಣಿ ತಹಶೀಲ್ದಾರ್ ಹಾಗೂ ಚಿಕ್ಕೋಡಿ ಉಪವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.