ಬೆಳಗಾವಿ: ನಗರದಲ್ಲಿ ಇಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಹಲ್ಲೆಗೆ ಒಳಗಾಗಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತಂತೆ ಬೆಳಗಾವಿ ನಗರದಲ್ಲಿ ಡಿಸಿಪಿ ರೋಹನ್ ಜಗದೀಶ್ ಮಾತನಾಡಿ, ಸಂಬಂಧಿ ಮುಸ್ಕಾನ್ ಜೊತೆ ಸಚಿನ್ ಲಮಾಣಿ ಓಡಾಡುತ್ತಿದ್ರು. ಈ ವೇಳೆ ಯುವಕ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದಂತ ಇಬ್ಬರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಈ ಪ್ರಕರಣದಲ್ಲಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಲಾಗಿದೆ. ಮೊಹಮ್ಮದ್ ಇನಾಂದಾರ್, ಆತೀಫ್ ಅಹ್ಮದ್ ಶೇಖ್, ಸೈಫ್ ಆಲಿ ಮುಗ್ದುಮ್, ಉಮರ್ ಬಡೇಗರ್, ಆಜಾನ್, ರಿಯಾನ್ ರೋಟವಾಲೆಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಮತ್ತೊಂದೆಡೆ ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಹಲ್ಲೆಗೊಳಗಾದಂತ ಇಬ್ಬರನ್ನು ವಿಹೆಚ್ ಪಿ ಪ್ರಾಂತ ಕೋಶಾಧ್ಯಕ್ಷ ಕೃಷ್ಣಭಟ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಕುಟುಂಬ ವರ್ಗದವರಿಗೂ ಧೈರ್ಯ ತುಂಬಿ ಆರ್ಥಿಕ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.
BIG NEWS: ‘KSRTC, BMTC ಬಸ್’ಗಳಲ್ಲಿ ’10ರೂ ಕಾಯಿನ್’ ಕಂಡಕ್ಟರ್ ಪಡೆಯಬೇಕು: ‘ಸಾರಿಗೆ ಇಲಾಖೆ’ ಖಡಕ್ ಸೂಚನೆ
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ