ಬೆಳಗಾವಿ : ಇತ್ತೀಚಿಗೆ ಕೋಲಾರದಲ್ಲಿ ಶಿಕ್ಷಕನೊಬ್ಬನ ಮೊಬೈಲ್ ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ ಇದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈಗ ಬೆಳಗಾವಿಯಲ್ಲಿ ಕಾಮುಕ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಶೌಚಾಲಯದ ಫೋಟೋ ತೆಗೆದುಕೊಂಡು ಬನ್ನಿ ಎಂದು ಹೇಳಿದ್ದಲ್ಲದೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ, ಆತನನ್ನು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.
ಹೌದು ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ ಎಂದು ತಿಳಿದುಬಂದಿದ್ದು,ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರದಿದ್ದಾನೆ.
ಅಲ್ಲದೇ, ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್ ಸಾದಿಕ್ ಹೇಳುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡಿದ್ದನು. ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು ಕೂಡ ಪತ್ತೆಯಾಗಿವೆ. ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 100ಕ್ಕೂ ಹೆಚ್ಚು ಫೋಟೋಗಳು ಪತ್ತೆಯಾಗಿವೆ.
ಶಿಕ್ಷಕ ಮೊಹಮ್ಮದ್ ಸಾದಿಕ್ ಪಾಠ ಮಾಡುವುದನ್ನ ಬಿಟ್ಟು ಕಾಮುಕನಾಗಿ ವಿಕೃತವಾಗಿ ವರ್ತಿಸುತ್ತಿದ್ದನು. ಶಿಕ್ಷಕ ಮೊಹಮ್ಮದ್ ಸಾದಿಕ್ ಕಳೆದ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥನಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಓರ್ವ ವಿದ್ಯಾರ್ಥಿನಿ ತಾಯಿಯ ಮುಂದೆ ದೌರ್ಜನ್ಯದ ಬಗ್ಗೆ ಹೇಳಿದಾಗ, ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಮೊಹಮ್ಮದ್ ಸಾದಿಕ್ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಸದ್ಯ ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಸೇವೆಯಿಂದ ಅಮಾನತ್ತು ಮಾಡಿ ಚಿಕ್ಕೋಡಿ ಡಿಡಿಪಿಐ ಬಿ.ಎ ಮೇಕನಮರಡಿ ಆದೇಶ ಹೊರಡಿಸಿದ್ದಾರೆ.