ಬೆಳಗಾವಿ: ಜಿಲ್ಲೆಯ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದಂತ ಗರ್ಭಿಣಿ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿದ್ದಳು. ಈ ಬಾಣಂತಿ ಸಾವಿನ ಕುರಿತಂತೆ ಬಿಮ್ಸ್ ಆಸ್ಪತ್ರೆಯ ವೈದ್ಯರಿಂದ ಸ್ಪಷ್ಟನೆ ನೀಡಲಾಗಿದೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬಿಮ್ಸ್ ಆಸ್ಪತ್ರೆಯ ವೈದ್ಯರು, ಬೆಳಗಾವಿಯ BIMS ಮೆಡಿಕಲ್ ಕಾಲೇಜಿನಲ್ಲಿ ಪೂಜಾ ಅಡಿವೆಪ್ಪ ಎಂಬುವರು ಹೆರಿಗೆ ಸಂದರ್ಭದಲ್ಲಿ ಸಾವಿಗೀಡಾಗಿದ್ದಾರೆ. 25 ವರ್ಷದ ಪೂಜಾ ಅವರು Dilated cardiomyopathy with aspiration pneumonia with antepartum eclampsia ದಿಂದ ಬಳಲುತ್ತಿದ್ದರು ಎಂದಿದ್ದಾರೆ.
24/12/2024 ರಂದು BIMS ಮೆಡಿಕಲ್ ಕಾಲೇಜಿನಲ್ಲಿ ಅಡ್ಮಿಟ್ ಆಗಿದ್ದ ಪೂಜಾ ಅವರು ಗಂಭೀರ ಸ್ಥಿತಿಯಲ್ಲಿದ್ದರು. ದಾಖಲಾದ ಸಂದರ್ಭದಲ್ಲಿ ರೋಗಿಯ ಮೂಗು ಮತ್ತು ಬಾಯಿಯಲ್ಲಿ ರಕ್ತಸ್ರಾವವಾಗುತ್ತಿತ್ತು. ಇದು ಪೂಜಾ ಅವರ ಐದನೆ ಬಾರಿಯ ಪ್ರಗ್ನೆನ್ಸಿಯಾಗಿತ್ತು ಎಂಬುದಾಗಿ ತಿಳಿಸಿದ್ದಾರೆ.
ಹೆರಿಗೆಯ ದಿನಾಂಕ ಇನ್ನೂ ಒಂದು ತಿಂಗಳು ಮುಂದಿದ್ದರಿಂದ, ಗರ್ಭಿಣಿ ಪೂಜಾ ಅವರು ಸ್ಥಿತಿ ಗಂಭೀರವಾಗಿದ್ದರಿಂದ ಮಗುವಿನ ಜೀವ ಉಳಿಸುವ ನಿಟ್ಟಿನಲ್ಲಿ ಕುಟುಂಬದವರ ಒಪ್ಪಿಗೆ ಪಡೆದು ಸಹಜ ಹೆರಿಗೆ ಮಾಡಿಸಲಾಗಿದೆ. ಪೂಜಾ ಅವರು ನಿಧನರಾಗಿದ್ದು, ಮಗುವನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ಹೇಳಿದ್ದಾರೆ.
Scam Alert: ನೀವು ಪಾರ್ಟ್ ಟೈಂ ಉದ್ಯೋಗ ಹುಡುಕ್ತಾ ಇದ್ದೀರಾ.? ಹಾಗಾದ್ರೇ ಈ ಸುದ್ದಿ ಓದಿ
ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ BJP ಅಶ್ವತ್ಥನಾರಾಯಣ್ ಆಗ್ರಹ
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut