ಬೆಂಗಳೂರು: ರಾಜ್ಯದಲ್ಲಿ ಹೊಸ ಜಿಲ್ಲೆಗಳ ಉದಯಕ್ಕೆ ನಾಳೆ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಂದಿ ಹಾಡಲಿದ್ದಾರೆ ಎನ್ನಲಾಗುತ್ತಿದೆ. ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಇದಕ್ಕೆ ಪುಷ್ಟಿ ನೀಡುವಂತ ಫೆಬ್ರವರಿ.8ರಂದು ರಾಜ್ಯ ಸರ್ಕಾರ ಹೊರಡಿಸಿರುವಂತ ಸುತ್ತೋಲೆ ಈಗ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲಿ ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಲಾಗಿದೆ.
ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯ ಹೆಸರು ಉಲ್ಲೇಖ ಮಾಡಲಾಗಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ಬಜೆಟ್ ನಲ್ಲಿ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಅಂದಹಾಗೇ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳು ಎಂಬುದಾಗಿ ಬೆಳಗಾವಿ ಹಾಗೂ ತುಮಕೂರು ಕರೆಯಲಾಗುತ್ತಿದೆ. ಈ ಜಿಲ್ಲೆಗಳನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ನಾಳೆ ಅಧಿಕೃತ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ.
‘ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಹೀಗಿದೆ ‘ರಾಜ್ಯ ಸರ್ಕಾರ’ದಿಂದ ಮಾನ್ಯತೆ ಪಡೆದ ‘ಖಾಸಗಿ ಆಸ್ಪತ್ರೆ’ಗಳ ಪಟ್ಟಿ