ಬೆಂಗಳೂರು: ಬೇಲೆಕೇರಿ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಕಾರವಾರ ಶಾಸಕರಾಗಿದ್ದಂತ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಈ ಬೆನ್ನಲ್ಲೇ ಅವರ ಶಾಸಕತ್ವವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.
ಇಂದು ಬೇಲೆಕೇರಿ ಬಂದರಿನಲ್ಲಿದ್ದಂ 11,312 ಮೆಟ್ರಿಕ್ ಟನ್ ಅದಿರು ಅಕ್ರಮ ನಾಪತ್ತೆ ಪ್ರಕರಣ ಸಂಬಂಧ ಶಾಸಕ ಸತೀಶ್ ಸೈಲ್ ಅವರಿಗೆ ಮೊದಲ ಕೇಸಲ್ಲಿ 5 ವರ್ಷ, 2ನೇ ಕೇಸಲ್ಲಿ 7 ವರ್ಷ ಕಠಿಣ ಶಿಕ್ಷೆ ಹಾಗೂ 9.6 ಕೋಟಿ ದಂಡವನ್ನು ವಿಧಿಸಿ ಆದೇಶಿಸಿದೆ.
ಇದಲ್ಲದೇ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಾಸಕ ಸತೀಶ್ ಸೈಲ್ ಅವರ ಶಾಸಕ ಸ್ಥಾನವನ್ನು ಶಿಕ್ಷೆಯ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ರ್ದದುಗೊಳಿಸಿ ಆದೇಶಿಸಿದೆ. ಈ ಮೂಲಕ ಸತೀಸ್ ಸೈಲ್ ಜೈಲುಪಾಲಾಗುವ ಮೂಲಕ, ಶಾಸಕ ಸ್ಥಾನದಿಂದಲೂ ಅನರ್ಹಗೊಂಡಂತೆ ಆಗಿದೆ.
ಬೆಂಗಳೂರು ಜನತೆ ಗಮನಕ್ಕೆ: ಅ.28ರಂದು ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut