ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಟೀಂಗೆ ಸ್ಪಷ್ಟ ಬಹುಮತವನ್ನು ಪಡೆದಿದೆ.
ಬೆಳಗಾವಿಯ ಡಿಸಿಸಿ ಬ್ಯಾಂಕಿಗೆ ಅ.19ರಂದು ಮತದಾನ ನಡೆದಿತ್ತು. ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಹಿನ್ನಲೆಯಲ್ಲಿ ಫಲಿತಾಂಶ ಘೋಷಣೆ ಮಾಡಿರಲಿಲ್ಲ.
ಬೆಲಹೊಂಗಲ, ಕಿತ್ತೂರು, ನಿಪ್ಪಾಣಿ, ಹುಕ್ಕೇರಿ ತಾಲ್ಲೂಕಿನ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಬೈಲಹೊಂಗಲ ತಾಲ್ಲೂಕಿನಿಂದ ಮಹಾಂತೇಶ ದೊಡ್ಡಗೌಡರ್ ಆಯ್ಕೆಯಾಗಿದ್ದಾರೆ.
ಕಿತ್ತೂರು ತಾಲ್ಲೂಕಿನಿಂದ ನಾನಾಸಾಹೇಬ್ ಪಾಟೀಲ್ ಆಯ್ಕೆಯಾಗಿದ್ದರೇ, ನಿಪ್ಪಾಣಿ ತಾಲ್ಲೂಕಿನಿಂದ ಅಣ್ಣಾಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಹುಕ್ಕೇರಿ ತಾಲ್ಲೂಕಿನಿಂದ ರಮೇಶ್ ಕತ್ತಿ ಆಯ್ಕೆಯಾಗಿದ್ದಾರೆ.
ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ನ.19 ರಂದು `ಅಕ್ಕ ಪಡೆ’ಗೆ ಚಾಲನೆ.!








