Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ ಕರ್ನಾಟಕದ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸೇರಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ
KARNATAKA

ಬೆಳಗಾವಿ ಕರ್ನಾಟಕದ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸೇರಲು ಬಿಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

By kannadanewsnow0901/11/2025 9:23 PM

ಬೆಂಗಳೂರು: ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಬೆಳಗಾವಿ ಕರ್ನಾಟಕ ಒಂದು ಭಾಗ, ಯಾವುದೇ ಕಾರಣಕ್ಕೂ ಮಹಾರಾಷ್ಟ್ರಕ್ಕೆ ಸೇರಲು ಬಿಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು.

ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಕರೆ ನೀಡಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ
ಗೋವಿಂದು ಅವರ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ನೀವು ‘CM ಸಿದ್ಧರಾಮಯ್ಯ’ಗೆ ದೂರು ನೀಡಬೇಕೇ? ಜಸ್ಟ್ ಹೀಗೆ ಮಾಡಿ ಸಾಕು, ನಿಮ್ಮ ‘ಸಮಸ್ಯೆ ಕ್ಲಿಯರ್’

BREAKING: ಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಶವ ಪತ್ತೆ

Share. Facebook Twitter LinkedIn WhatsApp Email

Related Posts

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM1 Min Read

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM1 Min Read

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM2 Mins Read
Recent News

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

22/04/2026 11:17 AM

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM
State News
KARNATAKA

ಮೈಸೂರಲ್ಲಿ ಮತ್ತೊಂದು ದುರಂತ : ಪ್ರವಾಸಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು, ಕಾವೇರಿ ನದಿಯಲ್ಲಿ ಮುಳುಗಿ ಸಾವು!

By kannadanewsnow0522/04/2026 11:17 AM KARNATAKA 1 Min Read

ಮೈಸೂರು : ಇತ್ತೀಚಿಗೆ ಕಾವೇರಿ ನದಿಯಲ್ಲಿ ದರ್ಗಾ ನೋಡಲು ಬಂದ ಆರು ಜನರು ನೀರಲ್ಲಿ ಮುಳುಗಿ ಸಾವನಪ್ಪಿದ್ದ ಘಟನೆ ನಡೆದಿತ್ತು…

BREAKING : ಚಾಮರಾಜನಗರದ ಬೂದಗಟ್ಟಿ ದೊಡ್ಡಿ ಅರಣ್ಯ ಪ್ರದೇಶದಲ್ಲಿ ಮಾನವನ ಅಸ್ಥಿಪಂಜರ ಪತ್ತೆ!

22/04/2026 11:09 AM

ಪೋಷಕರೇ ನಿಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ತಪ್ಪದೇ ಈ ಅಂಶಗಳನ್ನು ಗಮನಿಸಿ.!

22/04/2026 11:08 AM

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.