ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನ ಡಿ.29 ಕ್ಕೆ ಮೊಟಕುಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಸದನ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಫ್ತಿಗೊಳ್ಳಲಿದೆ ಎನ್ನಲಾಗಿದೆ.
ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ಡಿ.29 ಕ್ಕೆ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ ಹಿನ್ನೆಲೆ ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಫ್ತಿಗೊಳ್ಳಲಿದೆ ಎನ್ನಲಾಗಿದೆ. ಇಂದು ಸದನ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.
ಇನ್ನೂ ವಿಧಾನಸಭೆಯಲ್ಲಿ ಇಂದು ನಡೆದ ಅಧಿವೇಶನದಲ್ಲಿ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ 2022 ಅಂಗೀಕಾರವಾಗಿದೆ. ಸದನದಲ್ಲಿ ಬೆಂಗಳೂರು ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ಅಂಗೀಕಾರವಾಗಿದೆ. ಈ ಕುರಿತು ಸಿಎಂ ಬೊಮ್ಮಾಯಿ ಸದನದಲ್ಲಿ ಚರ್ಚೆ ನಡೆಸಿದ್ದು, ಬೆಂಗಳೂರಿನ ಬಗ್ಗೆ ಮಾತಾಡಿ ಬೆಂಗಳೂರು ಯೋಜನೆ ಪ್ರಕಾರ ಬೆಳೆಯಲಿಲ್ಲ ಎಂದಿದ್ದಾರೆ.
ಬೆಂಗಳೂರು ನಗರ ಅತಿವೇಗವಾಗಿ ಬೆಳೆಯುವ ನಗರವಾಗಿದೆ. ನಾವು ಯೋಜನೆ ಮಾಡಿದ ಪ್ರಕಾರ ಬೆಳೆಯಲಿಲ್ಲ, ರಸ್ತೆಯಲ್ಲಿ ಅಗಲೀಕರಣ ಆಗಿಲ್ಲ, ದೊಡ್ಡ ಪ್ರಮಾಣದಲ್ಲಿ ವಾಹನಗಳು ರಸ್ತೆಗೀಳಿಯುತ್ತಿದೆ. ಬೆಂಗಳೂರಿನಲ್ಲಿ 103 ಲಕ್ಷಕ್ಕೂ ಹೆಚ್ಚು ವಾಹನವಿದೆ. ಮನೆಯಲ್ಲಿ ಮೂರು ನಾಲ್ಕು ವೆಹಿಕಲ್ಸ್ ಗಳು ಇದೆ, ಹಾಗಾಗಿ ಅಧಿವೇಶನದಲ್ಲಿ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ಅಂಗೀಕಾರವಾಗಿದೆ ಎಂದರು.
BIGG NEWS: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಅಭಿಯಾನ