ಬಳ್ಳಾರಿ : ಬಳ್ಳಾರಿಯಲ್ಲಿಇಡಿ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಬಳ್ಳಾರಿಯ ಬಿಜೆಪಿ ಮುಖಂಡ ದೇವು ನಾಯಕ್ 7 ವರ್ಷದ ಬಾಳಿಕೆ ಮೇಲೆ ಅತ್ಯಾಚಾರ ಎಸೆಗಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಠಾಣೆಯ ಪೊಲೀಸರು ಬಿಜೆಪಿ ಮುಖಂಡ ದೇವು ನಾಯಕ್ ನನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಿಜೆಪಿ ಯುವ ಮುಖಂಡ ದೇವು ನಾಯಕ ಎನ್ನುವಾತ ಓರ್ವ ಮಹಿಳೆ ಸಹಾಯದಿಂದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ದೇವು ನಾಯಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಬಿಜೆಪಿ ಮುಖಂಡ ದೇವು ನಾಯಕ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ ಜಿಲ್ಲಾ ಪಂಚಾಯಿತಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾನೆ. ಅಲ್ಲದೇ ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಫೋಟೋ ತೆಗೆಸಿಕೊಂಡು, ಅವುಗಳನ್ನು ಸಾಮಾಜಿಕ ಜಾತಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ. ಇದೀಗ ಅತ್ಯಾಚಾರ ಆರೋಪದಲ್ಲಿ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.