ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕಾಗಿ ಫೈರಿಂಗ್ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಬಹಿರಂಗವಾಗಿಯೇ ಫೈರಿಂಗ್ ಮಾಡಿದಂತ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ರೆಡ್ಡಿಯ ಇಬ್ಬರು ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನಾಗಿರುವ ಸತೀಶ್ ರೆಡ್ಡಿ ಗನ್ ಮ್ಯಾನ್ ವಶಕ್ಕೆ ಪಡೆಯಲಾಗಿದೆ.
ಬಹಿರಂಗವಾಗಿ ಫೈರಿಂಗ್ ಮಾಡಿದ್ದ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗನ್ ಮ್ಯಾನ್ ಗಳು ಸೇರಿ 40 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 40 ಜನರನ್ನು ಬ್ರೂಸ್ ಪೇಟೆ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.








