ಬಳ್ಳಾರಿ : ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುತ್ತಿದ್ದ ವೇಳೆ ಉಪನ್ಯಾಸಕರೊಬ್ಬರು ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ನಗರದ ಸಂತಜಾನ್ ಪ್ರೌಢಶಾಲೆಯ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಮಾಡುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ ಕರಡಕಲ್ ಗ್ರಾಮದ ನಿವಾಸಿ ಶಂಕರಗೌಡ (೪೨) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಶಂಕರಗೌಡ ಅವರು ಮಸ್ಕಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಸಾಂದರ್ಭಿಕ ಚಿತ್ರ

Share.
Exit mobile version