ಮಂಗಳೂರು: ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದ್ದು, ಸಿಐಡಿ ಇನ್ಸ್ ಪೆಕ್ಟರ್ ಶಿವರಾಜ್ ಅವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ಆಗಮಿಸಿ ಕಡತಗಳ ಪರಿಶೀಲನೆಯ ಮೂಲಕ ತನಿಖೆ ಆರಂಭಿಸಿದ್ದಾರೆ.
BIGG NEWS: FIR ಬೇರೆ ಠಾಣೆಗೆ ವರ್ಗಾಯಿಸಿದ ತಕ್ಷಣ ನ್ಯಾಯಾಲಯದ ಗಮನಕ್ಕೆ ತನ್ನಿ; ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ
ಅಕ್ಟೋಬರ್ 13ರ ರಾತ್ರಿ 11.30 ಗಂಟೆ ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದುಷ್ಕರ್ಮಿಗಳು ದಾಳಿಗೆ ಯತ್ನಿಸಿದ್ದಾರೆ. ರಾತ್ರಿ ಶಾಸಕರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರು ನಲ್ಲಿ ಬಂದ ದುಷ್ಕರ್ಮಿಗಳು ಶಾಸಕರ ಕಾರು ಅಡ್ಡಗಟ್ಟಿ ತಲ್ವಾರ್ ನಿಂದ ದಾಳಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಹರೀಶ್ ಪೂಂಜಾ ತಮ್ಮ ಗೆಳೆಯರ ಕಾರಿನಲ್ಲಿ ಮುಂದೆ ಹೋಗುತ್ತಿದ್ದರೆ,ಈ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದದಿಂದ ನಿಂದಿಸಿ, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದರು.