ನವದೆಹಲಿ: ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ(24) ಅವರು ಭಾನುವಾರ ಮಧ್ಯಾಹ್ನ ನಿಧನರಾದರು. ಮೂಲಗಳ ಪ್ರಕಾರ, 24 ವರ್ಷದ ಯುವತಿ ಶನಿವಾರ ಮತ್ತು ಭಾನುವಾರದ ಮಧ್ಯ ರಾತ್ರಿಯಲ್ಲಿ ಅನೇಕ ಹೃದಯ ಸ್ತಂಭನಗಳಿಗೆ ಒಳಗಾದರು ಎಂದು ತಿಳಿದು ಬಂದಿದೆ.
ನವೆಂಬರ್ 1 ರಂದು ಮೆದುಳಿನ ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರು ಎರಡು ವಾರಗಳಿಗಿಂತ ಹೆಚ್ಚು ಕಾಲ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದರು. ಬಂಗಾಳಿ ಚಿತ್ರತಂಡವು ನಟಿ ಐಂದ್ರಿಲಾ ನಿಧನಕ್ಕೆ ಸಂತಾಪವನ್ನು ಸೂಚಿಸಿದೆ.
ಮೂಲಗಳ ಪ್ರಕಾರ, ವೆಂಟಿಲೇಟರ್ ಬೆಂಬಲದಲ್ಲಿದ್ದ ಐಂದ್ರಿಲಾ ( Bengali actor Aindrila Sharma ) ಅವರು ಶನಿವಾರ ರಾತ್ರಿ ಅನೇಕ ಹೃದಯ ಸ್ತಂಭನಗಳಿಗೆ ಒಳಗಾಗಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ ವೈದ್ಯರ ತಂಡವು ಅವರನ್ನು ಬದುಕಿಸೋ ಎಲ್ಲಾ ಪ್ರಯತ್ನವನ್ನು ಮಾಡಿತ್ತು.
ಆದರೇ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಮೆದುಳಿನ ಪಾರ್ಶ್ವವಾಯುವಿಗೆ ಒಳಗಾದ ನಂತರ ನವೆಂಬರ್ 1 ರಂದು ನಟಿಯನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕಳೆದ ಹಲವಾರು ದಿನಗಳಿಂದ ವೆಂಟಿಲೇಟರ್ ಬೆಂಬಲದಲ್ಲಿದ್ದರು. ಅವರು ಆಸ್ಪತ್ರೆಯಲ್ಲಿ 20 ದಿನಗಳ ಕಾಲ ಇದ್ದಾಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣವಾಗಲಿದೆ – ಸಿಎಂ ಬಸವರಾಜ ಬೊಮ್ಮಾಯಿ