ಬೆಂಗಳೂರು: ಈಗಾಗಲೇ ನಿನ್ನೆಯಿಂದ ಸುರಿಯುತ್ತಿರುವಂತ ಭಾರೀ ಮಳೆಗೆ ( Heavy Rain ) ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಂಗಳೂರಿಗರು ಮನೆಯಿಂದ ಹೊರ ಬರುವ ಮುನ್ನಾ ಎಚ್ಚರಿಕೆ ವಹಿಸೋ ಅಗತ್ಯವಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂಬುದಾಗಿ ಮುನ್ಸೂಚನೆಯನ್ನು ನೀಡಿದೆ.
ಅಂದಹಾಗೇ ರಾಜ್ಯಾಧ್ಯಂತ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟದಿಂದಾಗಿ ರಾಜ್ಯದ ಹಲವು ಜಿಲ್ಲೆಗಳ ಜನರು ತತ್ತರಿಸಿ ಹೋಗಿದ್ದಾರೆ. ಹಳ್ಳ-ಕೊಳ್ಳಗಳು ಉಕ್ಕಿ ಹರಿದ ಪರಿಣಾಮ ಕೆಲವೆಡೆ ರಸ್ತೆ ಸಂಚಾರ ಬಂದ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಟ್ಟ ಮನೆಯ ಮೇಲೆ ಕುಸಿತಗೊಂಡು ನಾಲ್ವರು ಸಾವನ್ನಪ್ಪಿರೋ ಘಟನೆ ನಡೆದಿದೆ.
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ ಹಿನ್ನಲೆ: ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ – CM ಬೊಮ್ಮಾಯಿ