ಬೆಂಗಳೂರು : ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವಿಸಿ ಹತ್ತು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಬಿ ಸಿ ಎಂ ಹಾಸ್ಟೆಲ್ ನ ವಿದ್ಯಾರ್ಥಿಗಳು ಇದೀಗ ಆಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಹೌದು ಇಂದು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಹಾಸ್ಟೆಲ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಈ ಒಂದು ಹಾಸ್ಟೆಲ್ ಒಳಪಡುತ್ತದೆ. ಇವಳೇ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಊಟ ಸರಿ ಇಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಜ್ಞಾನಭಾರತಿ ಆವರಣದ ಮುಖ್ಯರಸ್ತೆ ತಡೆದು ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳ ಮನವೊಲಿಕೆಗೆ ಮುಂದಾಗಿದ್ದಾರೆ.ಜ್ಞಾನಭಾರತಿ ಠಾಣೆ ಪೋಲಿಸರು ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಪೊಲೀಸರ ಮನವೊಲಿಕೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದ ನಂತರ ಸಂಚಾರ ಸಹ ಸ್ಥಿತಿಗೆ ಮರಳಿತು.