ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನಲ್ಲಿ ಭಾರಿ ದುರಂತ ಸಂಭವಿಸಿದ್ದು, ಹುಸ್ಕೂರು ಮದ್ದೂರಮ್ಮ’ ಜಾತ್ರೆಯಲ್ಲಿ ಸುಮಾರು 120 ಅಡಿ ಎತ್ತರ ತೇರು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಿಲಲಿಗೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಹುಸ್ಕೂರೂ ಮದ್ದೂರಮ್ಮ ಜಾತ್ರೆಯಲ್ಲಿ ಘಟನೆ ನಡೆದಿದೆ.ಹತ್ತಾರು ಗ್ರಾಮಗಳಿಂದ ಮದ್ದೂರಮ್ಮ ಜಾತ್ರೆಗೆ ತೇರು ಬರುತ್ತದೆ.ಎತ್ತುಗಳು ಟ್ರಕ್ಟರ್ ಗಳ ಮೂಲಕ ತೀರುವಿನಲ್ಲಿ ಘಟನೆ ನಡೆದಿದೆ.
ಹೀಲಲಿಗೆ ಗ್ರಾಮದಿಂದ ಹಸ್ಕೂರಿಗೆ ಬರುತ್ತಿದ್ದ 120 ಅಡಿ ತೇರು ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ತೇರು ಉರುಳಿ ಬಿದ್ದಿದೆ.ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ಉರುಳಿದೆ ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.