ಬೆಂಗಳೂರು : ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಈ ಒಂದು ಘೋರ ದುರಂತ ನಡೆದಿದೆ.
ಮೃತ ಬಾಲಕಿಯನ್ನು ತೇಜಸ್ವಿನಿ ಎಂದು ತಿಳಿದುಬಂದಿದೆ. ಇಂದು ಮಧ್ಯಾಹ್ನ ಹ ಶಾಲೆಯಿಂದ ಮನೆಗೆ ತೆರಳುವ ಸಂದರ್ಭದಲ್ಲಿ ವಿವಿ ಪುರಂ ಬಳಿಯ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದ 4ನೇ ಮಹಡಿಯಿಂದ ಮರದ ತುಂಡು ಒಂದು ಏಕಾಏಕಿ ಬಾಲಕಿ ತೇಜಸ್ವಿನಿ ಮೇಲೆ ಬಿದ್ದಿದೆ. ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದು ಘಟನೆ ಕುರಿತು ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.