ಬೆಂಗಳೂರು: ನಗರದಲ್ಲಿ ಘೋರ ದುರಂತ ಎನ್ನುವಂತೆ ಜೆಸಿಬಿ ಚಾಲಕನ ಅಜಾಗರೂಕ ಚಾಲನೆಯಿಂದಾಗಿ 2 ವರ್ಷದ ಮಗು ದುರ್ಮರಣ ಹೊಂದಿರೋ ಘಟನೆ ನಡೆದಿದೆ.
ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಮನೆಯ ಮುಂದೆ ಆಟ ಆಡುತ್ತಿದ್ದಂತ 2 ವರ್ಷದ ಥನವ್ ರೆಡ್ಡಿ ಎಂಬ ಮಗುವಿನ ಮೇಲೆ ಜೆಸಿಬಿ ಹರಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದಂತ ಮಗು ಆಸ್ಪತ್ರೆಗೆ ಸಾಗಿಸುತ್ತಿದ್ದಂತ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಜೆಸಿಬಿ ಚಾಲಕ ಅತಿವೇಗ, ಅಜಾಗರೂಕತೆಯಿಂದ ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ತೀವ್ರವಾಗಿ ಗಾಯಗೊಂಡಿದ್ದಂತ ಮಗುವನ್ನು ವೈದೇಹಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಆ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಈ ಸಂಬಂಧ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಘಟನೆಯ ಬಳಿಕ ಜೆಸಿಬಿ ಚಾಲಕ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
BIG NEWS: ರಾಜ್ಯ ಸರ್ಕಾರದ ಆದೇಶಕ್ಕೂ ಕ್ಯಾರೆ ಎನ್ನದ ವೈದ್ಯರು: ಮಾತೃ ಇಲಾಖೆಗೆ ತೆರಳಲು ಮೀನಾಮೇಷ
BREAKING:ಪರ್ವೇಶ್ ವರ್ಮಾ ದೆಹಲಿ ಸಿಎಂ ಆಗ್ತಾರಾ? ಬಿಜೆಪಿ ಅಭ್ಯರ್ಥಿ ಯಾರು | Delhi CM Announcement