ಬೆಂಗಳೂರು: ನಗರದಲ್ಲಿ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಚರ್ಚೆ ನಡೆಯುತ್ತಿದೆ. ಈ ಸಂಬಂಧ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರು ನಗರದಲ್ಲಿ ಯಾವ ಸ್ಥಳದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಕುರಿತಂತೆ ಮಹತ್ವದ ಚರ್ಚೆ ನಡೆಯಲಿದೆ.
ನಾಳೆ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಶಾಸಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಬೆಂಗಳೂರು ನಗರದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಕುರಿತಂತೆ ಮಹತ್ವದ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಕೈಗೊಳ್ಳೋ ಸಾಧ್ಯತೆ ಇದೆ.
ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ: ಕರೆ ಮಾಡಿದವರನ್ನು ವಿಮಾನ ಹಾರಾಟ ನಿಷೇಧ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತನೆ