ಬಳ್ಳಾರಿ: ನಗರದ ಗಾಂಧಿನಗರದ ನಗರ ಆರೋಗ್ಯ ಕೇಂದ್ರದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಅಂಗವಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು, ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಿದರು.
ಈ ವೇಳೆ ಮಹಾನಗರ ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ.ಅನೀಲ್ ಕುಮಾರ್, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಆಡಳಿತ ವೈದ್ಯಾಧಿಕಾರಿ ಡಾ.ಹನುಮಂತಪ್ಪ, ಔಷಧಿ ಅಧಿಕಾರಿ ಬೈಲಪ್ಪ ಸೇರಿದಂತೆ ಆರೋಗ್ಯ ಸಿಬ್ಬಂದಿಗಳು ಹಾಜರಿದ್ದರು.