ಬೆಂಗಳೂರು : ಬೆಂಗಳೂರು ನಗರದಲ್ಲಿ ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳನ್ನು ಹೇರಿಕೊಂಡು ಸಾಗಿಸುತ್ತಿದ್ದ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಶಾಲಾ ವಾಹನಗಳ ಚಾಲಕರ ವಿರುದ್ದ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಆರೋಪದಡಿ 338 ಪ್ರಕರಣ ದಾಖಲಿಸಿದ್ದಾರೆ.
ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣ : ಚಿಕಿತ್ಸೆ ಫಲಿಸದೇ ಮತ್ತೊಬ್ಬ ಬಾಲಕನ ಸಾವು
ನಗರ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 7.30ರಿಂದ 9.30ರ ವರೆಗೆ ಶಾಲಾ ವಾಹನಗಳ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. 2,059 ಶಾಲಾ ವಾಹನಗಳ ತಪಾಸಣೆ ಮಾಡಿದ್ದು, ಈ ವೇಳೆ ಪಾನಮತ್ತರಾಗಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Job Alert: KEAಯಿಂದ ‘1000 ಗ್ರಾಮ ಆಡಳಿತ ಅಧಿಕಾರಿ (VA)’ ನೇಮಕಕ್ಕೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ
ಅಂತೆಯೇ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುತ್ತಿದ್ದ 331 ವಾಹನಗಳ ಚಾಲಕರವಿರುದ್ಧಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧಕಾನೂನುಕ್ರಮಕೈಗೊಳ್ಳುವುದಾಗಿ ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಬಡವರಿಗೆ ’10’% ಮೀಸಲು ಜಾರಿ ವಿಚಾರ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್