ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿಯಾದಂತಹ ಕಾರ್ಯಾಚರಣೆ ನಡೆಸಿದ್ದು ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿದಂತೆ ಒಟ್ಟು ನಾಲ್ಕು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
BREAKING : ದೆಹಲಿ ಮದ್ಯ ನೀತಿ ಪ್ರಕರಣ : ಸಿಎಂ ‘ಕೇಜ್ರಿವಾಲ್’ಗೆ 8ನೇ ಬಾರಿಗೆ ‘ED’ ಸಮನ್ಸ್
ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 2.35 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರತ್ಯೇಕ ಮೂರು ಪ್ರಕರಣಗಳ ಸಂಬಂಧ ಸಿಸಿಬಿ ಕಾರ್ಯಾಚರಣೆ ನಡೆಸಿ ಅನೇಕರ ಹೆಡೆಮುರಿ ಕಟ್ಟಿದೆ. ವಿದೇಶದಿಂದ ಬಂದು ಡ್ರಗ್ ದಂಧೆಯಲ್ಲೇ ಭಾಗಿಯಾಗಿದ್ದ ಡ್ರಗ್ ಪೆಡ್ಲರ್ ಮತ್ತು ನೈಜಿರಿಯಾ ಹಾಗೂ ಘಾನದಿಂದ ಬಂದು ಪ್ರತ್ಯೇಕ ಎರಡು ತಂಡಗಳಿಂದ ನಡೆಯುತ್ತಿದ್ದ ಡ್ರಗ್ ದಂಧೆಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಎಸ್.ಟಿ ಸೋಮಶೇಖರ್ ಮನವೊಲಿಸಲು ‘ಪೂಜ್ಯ ತಂದೆ, ಅವರ ಮಗ’ ವಿಫಲ : BSY, BYV ವಿರುದ್ಧ ಯತ್ನಾಳ್ ವಾಗ್ದಾಳಿ
ಸೊಲದೇವನಹಳ್ಳಿಯ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಈ ಹಿಂದೆ ಇದೆ ಪ್ರಕರಣದಲ್ಲಿ ಜೈಲು ಸೇರಿದ್ದ ವ್ಯಕ್ತಿ ಜೈಲಿನಿಂದ ಬಿಡುಗಡೆಯಾಗಿ ಮತ್ತೋರ್ವ ವಿದೇಶಿ ವ್ಯಕ್ತಿಯ ಜೊತೆ ಸೇರಿಕೊಂಡು ಬೆಂಗಳೂರಿನಲ್ಲಿ ದಂಧೆ ನಡೆಸುತ್ತಿದ್ದ. ಸದ್ಯ ಈಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 51 ಲಕ್ಷ ಮೌಲ್ಯದ 500 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಈ ರೋಗ ಲಕ್ಷಣಗಳಿದ್ದವರು ಅರಿಶಿನ ಸೇವನೆ ಮಾಡುವ ಮುನ್ನ ಇದನ್ನೊಮ್ಮೆ ಓದಿ
ಇನ್ನು ಮತ್ತೊಂದೆಡೆ ಘಾನ ದೇಶದ ಇಮಾನ್ಯುಲ್ ಎಂಬ ಡ್ರಗ್ ಪೆಡ್ಲರ್ನನ್ನು ಬಂಧಿಸಲಾಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಬ್ಯುಸಿನೆಸ್ ವಿಸಾದಲ್ಲಿ ಬಂದ ಇಮಾನ್ಯುಲ್ ಡ್ರಗ್ಸ್ ದಂಧೆ ನಡೆಸುತ್ತಿದ್ದ. ಇನ್ನು ಇಂಡಿಯನ್ ಪೋಸ್ಟ್ ಮುಖಾಂತರ ಹೈಡ್ರೋ ಗಾಂಜಾ ತರಿಸಿಕೊಳ್ಳುತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಆರೋಪಿ ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ 3 ಲಕ್ಷ ಮೌಲ್ಯದ 42 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.