ಬೆಂಗಳೂರು : ಚಲಿಸುತ್ತಿದ್ದ ಐರಾವತ ಬಸ್ಸಿನ ಇಂಜಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 45 ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿ ಈ ಒಂದು ಘಟನೆ ನಡೆದಿದೆ. KA 57 F 0984 ಸಂಖ್ಯೆಯ ಐರಾವತ ಬಸ್ ನಲ್ಲಿ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಗಳೂರಿನಿಂದ ಈ ಒಂದು ಐರಾವತ ಬಸ್ ಚಿಕ್ಕಮಂಗಳೂರಿಗೆ ತೆರಳುತ್ತಿತ್ತು.
ಐರಾವತ ಬಸ್ ನಲ್ಲಿ ತೆರಳುತ್ತಿದ್ದ 45 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಬಳಿಕ ಸಾರಿಗೆ ಸಂಸ್ಥೆಯಿಂದ ಮತ್ತೊಂದು ಬಸ್ ವ್ಯವಸ್ಥೆ ಮಾಡಿ ಪ್ರಯಾಣಿಕರನ್ನು ಕಳುಹಿಸಿಕೊಡಲಾಗಿದೆ. ಘಟನೆ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.