ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಖಾಸಗಿ ನರ್ಸಿಂಗ್ ಕಾಲೇಜಿನ ಬಸ್ ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ಈ ಒಂದು ಅಗ್ನಿ ಅನಾಹುತ ನಡೆದಿದೆ.

ಘಟನೆಯಲ್ಲಿ ಖಾಸಗಿ ನರ್ಸಿಂಗ್ ಕಾಲೇಜಿನ ಐದು ಬಸ್ಸುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮುಂದುವರೆಸಿದ್ದಾರೆ. ಆದರೆ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದು ಪರಿಶೀಲನೆ ನಡೆಸುತ್ತಿದ್ದಾರೆ.

Share.
Exit mobile version