ಬೆಂಗಳೂರು : ಕುಡಿದ ಮಾತಿನಲ್ಲಿ ಕುದುರೆ ಸವಾರಿ ಮಾಡುವ ವಿಚಾರಕ್ಕೆ ಎರಡು ಗ್ರಾಮಗಳ ಯುವಕರ ಗುಂಪುಗಳ ನಡುವೆ ಮಾರಮಾರಿ ನಡೆದಿದ್ದು ಈ ಒಂದು ಗಲಾಟೆಯಲ್ಲಿ ಆರು ಯುವಕರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಟರಾಯಸ್ವಾಮಿ ಜಾತ್ರೆಯಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಮೋಟಗಾನಹಳ್ಳಿ ಹಾಗೂ ಯಂಟಗಾನಹಳ್ಳಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಮೋಟಗಾನಹಳ್ಳಿ ಹಾಗೂ ಯಂಟಗಾನಹಳ್ಳಿಯ ಯುವಕರ ನಡುವೆ ಗಲಾಟೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎರಡು ಗ್ರಾಮಗಳ ಯುವಕರ ಮಧ್ಯ ಮಾರಾಮಾರಿ ನಡೆದಿದೆ. ಈ ಒಂದು ಘಟನೆಯಲ್ಲಿ 6 ಜನರಿಗೆ ಗಂಭೀರವಾಗಿ ಗಾಯವಾಗಿದ್ದು, ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಕುಡಿದ ಮತ್ತಿನಲ್ಲಿ ಕುದುರೆ ಮೇಲೆ ಸವಾರಿ ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಘಟನೆ ಸಂಭಂದ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.