ಬೆಂಗಳೂರು : ಇದೀಗ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಬೆಂಗಳೂರಿನ ಎರಡು ಕಡೆ 7 ವರ್ಷದ ಬಾಲಕ ಹಾಗೂ ಇನ್ನೊಬ್ಬ ವ್ಯಕ್ತಿಗೆ ಹುಚ್ಚುನಾಯಿ ಕಡಿತದಿಂದ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನ ನೆಲಮಂಗಲದ ಮೈಲೆನಹಳ್ಳಿಯಲ್ಲಿ 7 ವರ್ಷದ ಬಾಲಕ ಚಿರಾಯು ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ಶಾಲೆಯಿಂದ ವಾಪಸ್ ಆಗುತ್ತಿದ್ದ ವೇಳೆ 7 ವರ್ಷದ ಚಿರಾಯು ಮೇಲೆ ಹುಚ್ಚುನಾಯಿ ದಾಳಿ ಮಾಡಿದೆ.
ಅದೇ ರೀತಿಯಾಗಿ ಭೋವಿ ಪಾಳ್ಯದಲ್ಲಿ ಹನುಮಂತರಾಜು ಎನ್ನುವ ವ್ಯಕ್ತಿಗೆ ಹುಚ್ಚು ನಾಯಿ ದಾಳಿ ಮಾಡಿದೆ. ಸದ್ಯ ಇಬ್ಬರಿಗೂ ಗಂಭೀರವಾದ ಗಾಯಗಳಾಗಿದ್ದು, ನೆಲಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹುಚ್ಚುನಾಯಿ ನಿಯಂತ್ರಿಸುವಂತೆ ಇದೀಗ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.