ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹೊರತುಪಡಿಸಿ, ಬೆಂಗಳೂರಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣ ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು, ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಇಂದಿನ ಸಭೆಯಲ್ಲಿ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣವನ್ನು ಎಲ್ಲಿ ನಿರ್ಮಿಸಬೇಕು ಎನ್ನುವುದು ಸೇರಿದಂತೆ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಯಿತು. ಇಂದಿನ ಸಭೆಯಲ್ಲೇ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಫೈನಲ್ ಮಾಡುವ ಸಾಧ್ಯತೆ ಇದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಸಭೆಯ ಬಳಿಕ ತಿಳಿಯಲಿದೆ.
ಬೆಂಗಳೂರಿನ ‘ಖಾಲಿ ನಿವೇಶನ ಮಾಲೀಕ’ರೇ ಹುಷಾರ್.! ಸ್ವಚ್ಛತೆ ಕಾಪಾಡದಿದ್ದರೇ BBMP ನೋಟೀಸ್, ದಂಡ ಫಿಕ್ಸ್
BREAKING: ದೆಹಲಿಗೆ ಬಂದಿಳಿದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ: IAF ಹಿರಿಯ ಅಧಿಕಾರಿಗಳಿಂದ ಸ್ವಾಗತ